ಅಯ್ಯಾ, ಪರಾತ್ಪರ ಸತ್ಯ ಸದಾಚಾರ

ಅಯ್ಯಾ, ಪರಾತ್ಪರ ಸತ್ಯ ಸದಾಚಾರ
ಗುರುಲಿಂಗಜಂಗಮದ ಶ್ರೀಚರಣವನು
ಹಿಂದೆ ಹೇಳಿದ ಅಚ್ಚಪ್ರಸಾದಿಯೋಪಾದಿಯಲ್ಲಿ
ನಿರ್ವಂಚಕತ್ವದಿಂದ ಗುರುಲಿಂಗಜಂಗಮಕ್ಕೆ
ಅರ್ಥಪ್ರಾಣಾಬ್ಥಿಮಾನವ ಸಮರ್ಪಿಸಿ,
ಒಪ್ಪತ್ತು ಅಷ್ಟವಿಧಾರ್ಚನೆ ಷೋಡಶೋಪಚಾರದಿಂದ
ಅರ್ಚನೆಯ ಮಾಡಿ, ಆ ಚರಣೋದಕ ಪ್ರಸಾದವನು
ತನ್ನ ಸರ್ವಾಂಗದಲ್ಲಿ ನೆಲೆಸಿರ್ಪ ಇಷ್ಟ ಮಹಾಲಿಂಗದೇವಂಗೆ
ಕೊಟ್ಟು ಕೊಂಬುವಂತಹದೆ ಇದಿರಿಟ್ಟು
ಜಂಗಮ ಪಾದೋದಕ ಪ್ರಸಾದವ ಕೊಂಬ
ಆಚರಣೆಯ ನಿಲುಗಡೆ ನೋಡಾ.
ಆಮೇಲೆ ಒಪ್ಪತ್ತು ಸಂಬಂಧವಿಟ್ಟು
ಆಚರಿಸುವ ನಿಲುಕಡೆ ಎಂತೆಂದಡೆ
ಅಯ್ಯಾ, ನಿನ್ನ ಷಟ್‍ಸ್ಥಾನದಲ್ಲಿ ನೆಲೆಸಿರ್ಪ ಇಷ್ಟಮಹಾಲಿಂಗದೇವನ
ತ್ರಿವಿಧಸ್ಥಾನದಲ್ಲಿ ಓಂ ಬಸವಣ್ಣ ಚೆನ್ನಬಸವಣ್ಣ ಅಲ್ಲಮಪ್ರಭುವೆಂಬ
ತ್ರಿವಿಧ ನಾಮಸ್ವರೂಪವಾದ ಷೋಡಶಾಕ್ಷರಂಗಳೆ
ಷೋಡಶವರ್ಣವಾಗಿ ನೆಲೆಸಿಪ್ಪರು ನೋಡಾ.
ಇಂತು ಷೋಡಶಕಳಾಸ್ವರೂಪವಾದ
ಚಿದ್ಘನ ಮಹಾಲಿಂಗದೇವನ
ನಿರಂಜನ ಜಂಗಮದೋಪಾದಿಯಲ್ಲಿ
ಸಗುಣ ನಿರ್ಗುಣ ಪೂಜೆಗಳ ಮಾಡಿ
ಜಂಗಮಚರಣಸೋಂಕಿನಿಂ ಬಂದ
ಗುರುಪಾದೋದಕವಾದಡೂ ಸರಿಯೆ,
ಅದು ದೊರೆಯದಿದ್ದಡೆ,